ಪಶ್ಚಿಮ ಘಟ್ಟಗಳು

 ಘಟ್ಟಗಳು

ಪಶ್ಚಿಮ ಘಟ್ಟಗಳು ಭಾರತದ ಜಂಬೂದ್ವೀಪದ ಪಶ್ಚಿಮ ಭಾಗದಲ್ಲಿರುವ ಒಂದು ಪರ್ವತ ಶ್ರೇಣಿ.

ಈ ಶ್ರೇಣಿಗೆ ಸಹ್ಯಾದ್ರಿ ಪರ್ವತಗಳು ಎಂಬ ಹೆಸರು ಸಹ ಇದೆ.

ದಖ್ಖನ್ ಪೀಠಭೂಮಿಯ ಪಶ್ಚಿಮದ ಅಂಚಿನ ಉದ್ದಕ್ಕೂ ಹಬ್ಬಿರುವ ಪಶ್ಚಿಮ ಘಟ್ಟಗಳು ಪೀಠಭೂಮಿಯನ್ನು ಅರಬ್ಬೀ ಸಮುದ್ರದ ಕಿರಿದಾದ ಕರಾವಳಿ ಪ್ರದೇಶದಿಂದ ಬೇರ್ಪಡಿಸುತ್ತವೆ.

ಮಹಾರಾಷ್ಟ್ರ –
ಗುಜರಾತ್ ಗಳ ಗಡಿಪ್ರದೇಶದಲ್ಲಿ ತಾಪ್ತಿ ನದಿಯ ದಕ್ಷಿಣದಲ್ಲಿ ಆರಂಭವಾಗುವ ಈ ಶ್ರೇಣಿಯು ದಕ್ಷಿಣಾಭಿಮುಖವಾಗಿ ಹಬ್ಬಿ
ಕನ್ಯಾಕುಮಾರಿಯವರೆಗೆ ಇರುವುದು.

ಒಟ್ಟು ಸುಮಾರು 1600 ಕಿ.ಮೀ. ಉದ್ದವಿರುವ ಪಶ್ಚಿಮ ಘಟ್ಟಗಳು ಮಹಾರಾಷ್ಟ್ರ, ಗೋವಾ , ಕರ್ನಾಟಕ ,
ಕೇರಳ ಮತ್ತು ತಮಿಳುನಾಡಿನಲ್ಲಿ ಹಬ್ಬಿವೆ.
ಒಟ್ಟು ಶ್ರೇಣಿಯ ಅರ್ಧಕ್ಕಿಂತ ಹೆಚ್ಚು ಭಾಗವು ಕರ್ಣಾಟಕದಲ್ಲಿಯೇ ಇದೆ.

ಪಶ್ಚಿಮ ಘಟ್ಟಗಳು ಒಟ್ಟು 60,000 ಚದರ ಕಿ.ಮೀ. ಪ್ರದೇಶವನ್ನು ಆವರಿಸಿದ್ದು ಅತಿ ಸಂಕೀರ್ಣ ನದಿ ವ್ಯವಸ್ಥೆಗೆ ಮೂಲವಾಗಿವೆ.
ಇಲ್ಲಿಂದ ಹೊರಡುವ ನದಿಗಳು ಭಾರತದ ಒಟ್ಟು ಜಲಾನಯನ ಪ್ರದೇಶದ 40% ಭಾಗವನ್ನು ಆವರಿಸಿವೆ.

ಪಶ್ಚಿಮ ಘಟ್ಟಗಳ ಸರಾಸರಿ ಎತ್ತರ ಸುಮಾರು 1200 ಮೀಟರ್.

ಈ ಪ್ರದೇಶವು ವಿಶ್ವದ ಅತ್ಯಂತ ಸಕ್ರಿಯ ಜೀವವೈವಿಧ್ಯದ ನೆಲೆಗಳಲ್ಲಿ ಒಂದಾಗಿದ್ದು 5000ಕ್ಕೂ ಹೆಚ್ಚಿನ ತಳಿಯ ಗಿಡಮರಗಳು, 139 ಬಗೆಯ
ಸಸ್ತನಿಗಳು , 508 ಪ್ರಭೇದದ ಪಕ್ಷಿಗಳು ಮತ್ತು 179 ಪ್ರಕಾರದ ದ್ವಿಚರಿಗಳಿಗೆ ನೆಲೆಯಾಗಿವೆ.

ವಿಶ್ವದಲ್ಲಿ ಅಳಿವಿನಂಚಿನಲ್ಲಿರುವ ಜೀವತಳಿಗಳ ಪೈಕಿ 325 ತಳಿಗಳ ಜೀವಿಗಳು ಪಶ್ಚಿಮ ಘಟ್ಟಗಳಲ್ಲಿ ನೆಲೆಸಿವೆ.

 ಪಶ್ಚಿಮ ಘಟ್ಟಗಳ ಮುಖ್ಯ ಶಿಖರಗಳು :

— ಸಾಲ್ಹೇರ್, ಕಾಲ್ಸೂಬಾಯಿ, ಮಹಾಬಲೇಶ್ವರ, ಸೋನ್‌ಸಾಗರ್, ಮುಳ್ಳಯ್ಯನಗಿರಿ(1913 ಮೀ.), ಕೆಮ್ಮಣ್ಣುಗುಂಡಿ, ಕೊಡಚಾದ್ರಿ, ಕುದುರೆಮುಖ, ಚೆಂಬ್ರ, ವೆಲ್ಲರಿಮಲ, ಬಾಣಾಸುರ, ದೊಡ್ಡಬೆಟ್ಟ, ಆನೈ ಮುಡಿ(2695 ಮೀ.) ಮತ್ತು ಮಹೇಂದ್ರಗಿರಿ.
ದಕ್ಷಿಣ ಭಾರತದ ಅತ್ಯಂತ ಎತ್ತರವಾದ ಶಿಖರ ತಮಿಳುನಾಡಿನ – ಆನೈ ಮುಡಿ ಪಶ್ಚಿಮಘಟ್ಟ ದಲ್ಲಿದೆ.

ಪಶ್ಚಿಮ ಘಟ್ಟಗಳ ಮತ್ತು ಅರಬ್ಬೀ ಸಮುದ್ರದ ನಡುವೆ ಇರುವ ಕಿರಿದಾದ ಕರಾವಳಿಯ ಉತ್ತರ ಭಾಗವು – ಕೊಂಕಣ ಪ್ರದೇಶವೆಂದು ಹೆಸರಾಗಿದ್ದರೆ ಮಧ್ಯ ಭಾಗವು – ಕೆನರಾ ಮತ್ತು ದಕ್ಷಿಣ ಭಾಗವು – ಮಲಬಾರ್ ಪ್ರಾಂತವೆಂದು ಕರೆಯಲ್ಪಡುವುವು.
ಪಶ್ಚಿಮ ಘಟ್ಟಗಳಲ್ಲಿ ಊಟಿ, ಕೊಡೈಕೆನಾಲ್‌ ಮತ್ತು ಬೆರಿಜಮ್ ಮುಂತಾದ ದೊಡ್ಡ ಸರೋವರಗಳಿವೆ.
ಪಶ್ಚಿಮ ಘಟ್ಟದಲ್ಲಿ ಹುಟ್ಟುವ ಪ್ರಮುಖ ನದಿಗಳು ಕೃಷ್ಣಾ, ಕಾವೇರಿ & ಗೋದಾವರಿ (ಪೂರ್ವಾಭಿಮುಖವಾಗಿ ಹರಿಯುವ ನದಿಗಳು)

ಜುಲೈ 1, 2012 ರಂದು ಈ ಪಶ್ಚಿಮ ಘಟ್ಟಗಳನ್ನು – ವಿಶ್ವ ಪರಂಪರೆಯ ತಾಣವನ್ನಾಗಿ ಯುನೆಸ್ಕೋ ಘೋಷಿಸಿದೆ.
ಪಶ್ಚಿಮ ಘಟ್ಟಗಳ ರಕ್ಷಣೆಗೆ ಸಂಬಂಧಿಸಿದ ಸಮಿತಿಗಳು
ಕೆ. ಕಸ್ತೂರಿರಂಗನ್ ಸಮಿತಿ
ಗಾಡ್ಗಿಳ್ ಸಮಿತಿ

Leave a Reply

Your email address will not be published. Required fields are marked *